ಬೆಂಗಳೂರು : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ನಾಲ್ವರು ಆಯೋಜನರನ್ನು ಬಂಧಿಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಮೂವರು ಆಯೋಜಕರನ್ನು ಬಂಧಿಸಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ.