ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಇಂದು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಮುಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಇಂದು ಇಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ 9 ಕಡೆ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಲ್ಡರ್ ವೊಬ್ಬರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರು, ಮೈಸೂರು ಸೇರಿದಂತೆ 9 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.