ಬೆಂಗಳುರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ A3 ಹಾಗೂ A4 ಆರೋಪಿಗಳಿಗೆ ಲೊಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿವೆ.
ಮುಡಾ ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಇದೀಗ ಪ್ರಕರಣ A3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ A4 ಆರೋಪಿ ದೇವರಾಜು ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಕೋರ್ಟ್ ಆದೇಶದಂತೆ ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅವರ ಪತ್ನಿ ಪಾರ್ವತಿ ಎ.2 ಆರೋಪಿಯಾಗಿದ್ದಾರೆ. ಸಿದ್ಧರಾಮಯ್ಯ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ.4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯನ್ನಾಗಿ ಮಾಡಿ ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.