ಬೆಂಗಳೂರು : ಐಪಿಎಲ್ ಬ್ಲ್ಯಾಕ್ ಟಿಕೆಟ್ ದಂಧೆಕೋರರಿಗೆ ಪೊಲೀಸರು ಇದೀಗ ಬಿಸಿ ಮುಟ್ಟಿಸಿದ್ದು ಕಳೆದ ಒಂದು ತಿಂಗಳಲ್ಲಿ ಇದುವರೆಗೂ 17 ಕೇಸುಗಳು ದಾಖಲಾಗಿವೆ. ಇದುವರೆಗೆ ಬ್ಲಾಕ್ ಟಿಕೆಟ್ ಗಳ ಮಾರಾಟ ಸಂಬಂಧ ಪೊಲೀಸರು 17 ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲ್ಲದೆ 17 ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 24 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ 16ಕೇಸ್ ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಕೇಸ್ ದಾಖಲಾಗಿದೆ. ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 5 ಪಂದ್ಯಗಳಲ್ಲಿ ಪೊಲೀಸರು 37 ಟಿಕೆಟ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ ಎಂ. ಹಾಕೆ ಈ ಒಂದು ಮಾಹಿತಿ ನೀಡಿದ್ದಾರೆ ಕಬ್ಬನ್ ಪಾರ್ಕ್ ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಈ ಕುರಿತು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.








