ನವದೆಹಲಿ : ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತಿಯ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಇವನು ಕ್ಷಿಪಣಿ ದಾಳಿಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದರೆ. ಹೀಗಾಗಿ ನಾಳೆ ಧರ್ಮ ಶಾಲಾದಲ್ಲಿ ಐಪಿಎಲ್ ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದ್ದು, ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯ ಸ್ಥಳಾಂತರ ಆಗಬಹುದು ಎನ್ನಲಾಗಿದೆ.
ಹೌದು ನಾಳೆ ದೆಹಲಿ ಮತ್ತು ಪಂಜಾಬ್ ನಡುವೆ ಐಪಿಎಲ್ ಪಂದ್ಯ ನಡೆಯಲಿದೆ. ಪಂಜಾಬ್ ನ ಧರ್ಮಶಾಲಾದಲ್ಲಿ ಈ ಒಂದು ಐಪಿಎಲ್ ಪಂದ್ಯ ನಡೆಯಲಿದ್ದು ಪಂದ್ಯ ನಡೆಸುವ ಕುರಿತಂತೆ ಬಿಸಿಸಿಐ ನಿರಂತರವಾಗಿ ಕೇಂದ್ರ ಸರ್ಕಾರದ ಜೊತೆಗೆ ಸಂಪರ್ಕದಲ್ಲಿದೆ. ಬಹುತೇಕ ನಾಳೆ ಧರ್ಮಶಾಲಾದಲ್ಲಿ ನಡೆಯಬೇಕಿರುವ ದೆಹಲಿ ಮತ್ತು ಪಂಜಾಬ್ ನಡುವಿನ ಐಪಿಎಲ್ ಪಂದ್ಯ ಸ್ಥಳಾಂತರ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.