ಬೆಳಗಾವಿ : ಇರಾನ್ ಇಸ್ರೇಲ್ ಯುದ್ಧದ ಸಂಘರ್ಷದ ಹಿನ್ನೆಲೆಯಲ್ಲಿ ಇದೀಗ ಬೆಳಗಾವಿಯ ಸಾಮ್ರಾ ವಿಮಾನ ನಿಲ್ದಾಣವನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಹೌದು ಇರಾನ್-ಇಸ್ರೇಕ್ ಸಂಘರ್ಷದ ಬಿಸಿ ಹಿಂದೂ ಮಹಾಸಾಗರಕ್ಕೂ ತಟ್ಟಿದ್ದಾಯ್ತು. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ಅಲ್ಲದೆ, ಏರ್ಪೋರ್ಟ್ ಸುತ್ತಲಿನ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಉಲ್ಲಂಘಿಸಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣವನ್ನು ಹಾಗೂ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ರೆಡ್ ಜೋನ್ ಎಂದು ಘೋಷಿಸಿರುತ್ತಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಪ್ರೋನ್ /ಅನ್ಮ್ಯಾನಡ್ ಏರಿಯಲ್ ವಾಹನ ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.








