ನವದೆಹಲಿ: ಅರಬ್ಬಿ ಸಮುದ್ರ ಮತ್ತು ಹಾರ್ಮುಜ್ ಜಲಸಂಧಿಯ ಪ್ರದೇಶದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ದಟ್ಟವಾಗಿದೆ. ಸುಮಾರು 20 ಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಹೊತ್ತು ಸಾಗುತ್ತಿದ್ದ ಭಾರತೀಯ ಮೂಲದ ಬೃಹತ್ ತೈಲ ಟ್ಯಾಂಕರ್ ಅನ್ನು ಇರಾನ್ ನೌಕಾಪಡೆ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಅಂತರಾಷ್ಟ್ರೀಯ ಸಮುದ್ರ ಭದ್ರತಾ ಸಂಸ್ಥೆಗಳು ವರದಿ ಮಾಡಿವೆ.
ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೌಕೆಗಳು ಭಾರತೀಯ ಹಡಗನ್ನು ತಡೆದು ನಿಲ್ಲಿಸಲು ಯತ್ನಿಸಿವೆ. ಈ ವೇಳೆ ಎಚ್ಚರಿಕೆ ನೀಡಲು ಗುಂಡಿನ ದಾಳಿ ನಡೆಸಲಾಗಿದ್ದು, ಹಡಗಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಹಡಗು ಇರಾನ್‌ನ ಮೇಲೆ ಹೇರಲಾಗಿರುವ ಅಮೆರಿಕದ ದಿಗ್ಬಂಧನವನ್ನು ಮೀರಿ ತೈಲ ಸಾಗಿಸುತ್ತಿತ್ತು ಎಂಬ ಶಂಕೆಯ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಹಡಗಿನಲ್ಲಿರುವ ಭಾರತೀಯ ಸಿಬ್ಬಂದಿಗಳ ಸುರಕ್ಷತೆಯ ಬಗ್ಗೆ ಈಗ ಆತಂಕ ಮೂಡಿದೆ.
20 ಲಕ್ಷ ಬ್ಯಾರೆಲ್‌ನಷ್ಟು ಬೃಹತ್ ಪ್ರಮಾಣದ ತೈಲ ಸಾಗಿಸುತ್ತಿದ್ದ ಈ ಟ್ಯಾಂಕರ್ ಮೇಲಿನ ದಾಳಿಯಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.








