ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಯಹೂದಿ ವಸ್ತುಸಂಗ್ರಹಾಲಯದ ಬಳಿ ಇಸ್ರೇಲಿ ರಾಯಭಾರ ಕಚೇರಿಯ ಇಬ್ಬರು ಉದ್ಯೋಗಿಗಳನ್ನು ಗುಂಡಿಕ್ಕಿ ಕೊಲ್ಲಲಾಯಿತು. ಶಂಕಿತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ ತಿಳಿಸಿದೆ.
ವಾಯುವ್ಯದಲ್ಲಿರುವ ಯಹೂದಿ ವಸ್ತುಸಂಗ್ರಹಾಲಯದ ಬಳಿಯ ಮೂರನೇ ಮತ್ತು ಎಫ್ ಬೀದಿಗಳ ಪ್ರದೇಶದಲ್ಲಿ ಒಬ್ಬ ಪುರುಷ ಮತ್ತು ಮಹಿಳೆಯನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಘಟನೆಯ ನಂತರದ ವಿಡಿಯೋವೊಂದು ಸಹ ಹೊರಬಂದಿದ್ದು, ಅದರಲ್ಲಿ ಗುಂಡು ಹಾರಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಆರೋಪಿಯ ಎರಡೂ ಕೈಗಳನ್ನು ಹಿಂದಿನಿಂದ ಹಿಡಿದುಕೊಂಡಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಈ ಸಮಯದಲ್ಲಿ, ಆ ವ್ಯಕ್ತಿಯು ‘ಫ್ರೀ ಪ್ಯಾಲೆಸ್ಟೈನ್’ ಎಂಬ ಘೋಷಣೆಗಳನ್ನು ಕೂಗುತ್ತಾನೆ.
Two Israeli Embassy staff were senselessly killed tonight near the Jewish Museum in Washington DC. We are actively investigating and working to get more information to share. Please pray for the families of the victims.
We will bring this depraved perpetrator to justice.
— Secretary Kristi Noem (@Sec_Noem) May 22, 2025