ಬೆಂಗಳೂರು : ಆದಾಯ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಜೀವನ್ ಭೀಮಾನಗರ ಬಳಿ ಇರುವ ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಕಡತಗಳನ್ನು ಪರಿಶೀಲಿಸುತ್ತಿದ್ದಾರೆ. ಆದಾಯ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.








