Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಅತ್ಯಂತ ಕಲುಷಿತ ನಗರ ದೆಹಲಿಯಲ್ಲ, ಉತ್ತರ ಪ್ರದೇಶದ ‘ಲೋನಿ’: ಜಾಗತಿಕ ವರದಿಯಲ್ಲಿ ಬಯಲಾದ ಆತಂಕಕಾರಿ ಸತ್ಯ!

26/03/2026 9:34 AM

BIG NEWS : ಭಾರತದಲ್ಲಿ ಮತ್ತೆ ‘ಲಾಕ್‌’ಡೌನ್’ ವದಂತಿ : ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ.!

26/03/2026 9:30 AM

BIG NEWS : ವರದಕ್ಷಿಣೆ ಕಿರುಕುಳ ಕೇಸ್ ನಲ್ಲಿ ಪತಿ ಮನೆಯವರನ್ನು ಅನಗತ್ಯವಾಗಿ ಎಳೆಯುವಂತಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

26/03/2026 9:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ನಾಳೆಯಿಂದ ಓಲಾ, ಊಬರ್ ಬೈಕ್ ಟ್ಯಾಕ್ಸಿ ಸ್ಥಗಿತ ಬಹುತೇಕ ಖಚಿತ
KARNATAKA

BREAKING : ರಾಜ್ಯದಲ್ಲಿ ನಾಳೆಯಿಂದ ಓಲಾ, ಊಬರ್ ಬೈಕ್ ಟ್ಯಾಕ್ಸಿ ಸ್ಥಗಿತ ಬಹುತೇಕ ಖಚಿತ

By kannadanewsnow0515/06/2025 5:17 AM

ಬೆಂಗಳೂರು : ರಾಜ್ಯದಲ್ಲಿ ಓಲಾ, ಉಬರ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ಜೂನ್‌ 24ಕ್ಕೆ ನಿಗದಿ ಪಡಿಸಿದೆ. ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂನ್‌ 15ರ ಬಳಿಕ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳ್ಳುವುದು ಬಹುತೇಕ ಖಚಿತವಾಗಿದೆ.

ರಾಜ್ಯದಲ್ಲಿ ಸೂಕ್ತ ನಿಯಮಗಳ ರಚನೆ ಯಾಗದ ಹಿನ್ನೆಲೆಯಲ್ಲಿ ಬೈಕ್‌ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕ ಸದಸ್ಯಪೀಠ ಆದೇಶ ಪ್ರಶ್ನಿಸಿ ಉಬರ್‌ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್‌ ಲಿಮಿಟೆಡ್‌, ಎಎನ್‌ಐ ಟಕ್ನಾಲಜಿ ಪ್ರೈವೇಟ್‌ ಲಿಮಿಟೆಡ್‌ (ಓಲಾ), ವರ್ಕುಟಿ ಮಹೇಂದ್ರ ರೆಡ್ಡಿ(ಬೈಕ್‌ ಟ್ಯಾಕ್ಸಿಗಳ ಮಾಲೀಕರು) ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ವಿ.ಕಾಮೇಶ್ವರ ರಾವ್‌ ಮತ್ತು ನ್ಯಾಯ ಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ಅಡ್ವೋಕೆಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ವಾದಿಸಿ, ನಾಲ್ಕು ಚಕ್ರ ವಾÖ ‌ನಗಳು ಮತ್ತು ಮೂರು ಚಕ್ರ ವಾಹನಗಳು ಅನುಮತಿ ಪಡೆದು ತೆರಿಗೆ ಪಾವತಿಸಿ ಬಾಡಿಗೆ ವಾಹನಗಳಾಗಿ ಕಾರ್ಯ ನಿರ್ವಹಿಸುತ್ತಿವೆ. ದ್ವಿ ಚಕ್ರವಾಹನಗಳು ಬಾಡಿಗೆ ವಾಹನಗಳಾಗಿ ಕಾರ್ಯಚರಿಸಲು ಸಾಧ್ಯವಿಲ್ಲ. ದ್ವಿಚಕ್ರ ವಾಹನಗಳು ಬಾಡಿಗೆ ವಾಹನಗಳಾಗಿ ಕಾರ್ಯಾಚರಣೆ ನಡೆಸಲು 8 ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಜೂನ್‌ 24ಕ್ಕೆ ಮುಂದೂಡಿತು.

ಏನಿದು ಪ್ರಕರಣ?

ಮೋಟಾರು ವಾಹನ ಕಾಯ್ದೆಯ ನಿಯಮ ಗಳ ಪ್ರಕಾರವಾಗಿ ಹಳದಿ ನೋಂದಣಿ ಫ‌ಲಕ ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್‌ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬು ದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡ ಬೇಕು ಎಂದು ಕೋರಿ ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್‌ ಲಿಮಿಟೆಡ್‌. ರೊಪ್ಪೆನ್‌ ಟ್ರಾನ್ಸ್‌ಪೊರ್ಟೇಶನ್‌ ಸರ್ವೀಸಸ್‌ ಪ್ರೈವೇಟ್‌ ಲಿಮಿಟೆಡ್‌ ಮತ್ತು ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿ ಗಳ ವಿಚಾರಣೆ ನಡೆಸಿದ್ದ ನ್ಯಾಯ ಪೀಠ, ಬೈಕ್‌ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅಗ್ರಿಗ್ರೇಟರ್‌ ಸಂಸ್ಥೆಗಳು ಹೈಕೋರ್ಟ್‌ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

Share. Facebook Twitter LinkedIn WhatsApp Email

Related Posts

BREAKING : ಬಿ.ಎಸ್. ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ : ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ ಸಮಾವೇಶ!

26/03/2026 9:22 AM1 Min Read

ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ಗಣ್ಯರ ಜೇಷ್ಠತಾ ಪಟ್ಟಿ ಹೀಗಿದೆ.!

26/03/2026 8:48 AM1 Min Read

BIG NEWS : `ಮದ್ಯ ಮಾರಾಟ’ಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಬಾರ್ ಮಾಲೀಕರಿಗೆ ಹೈಕೋರ್ಟ್ ಖಡಕ್ ಸೂಚನೆ !

26/03/2026 7:45 AM1 Min Read
Recent News

ವಿಶ್ವದ ಅತ್ಯಂತ ಕಲುಷಿತ ನಗರ ದೆಹಲಿಯಲ್ಲ, ಉತ್ತರ ಪ್ರದೇಶದ ‘ಲೋನಿ’: ಜಾಗತಿಕ ವರದಿಯಲ್ಲಿ ಬಯಲಾದ ಆತಂಕಕಾರಿ ಸತ್ಯ!

26/03/2026 9:34 AM

BIG NEWS : ಭಾರತದಲ್ಲಿ ಮತ್ತೆ ‘ಲಾಕ್‌’ಡೌನ್’ ವದಂತಿ : ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ.!

26/03/2026 9:30 AM

BIG NEWS : ವರದಕ್ಷಿಣೆ ಕಿರುಕುಳ ಕೇಸ್ ನಲ್ಲಿ ಪತಿ ಮನೆಯವರನ್ನು ಅನಗತ್ಯವಾಗಿ ಎಳೆಯುವಂತಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

26/03/2026 9:22 AM

BREAKING : ಬಿ.ಎಸ್. ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ : ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ ಸಮಾವೇಶ!

26/03/2026 9:22 AM
State News
KARNATAKA

BREAKING : ಬಿ.ಎಸ್. ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ : ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ ಸಮಾವೇಶ!

By kannadanewsnow5726/03/2026 9:22 AM KARNATAKA 1 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ರಾಜಕಾರಣದಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ,…

ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ಗಣ್ಯರ ಜೇಷ್ಠತಾ ಪಟ್ಟಿ ಹೀಗಿದೆ.!

26/03/2026 8:48 AM

BIG NEWS : `ಮದ್ಯ ಮಾರಾಟ’ಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಬಾರ್ ಮಾಲೀಕರಿಗೆ ಹೈಕೋರ್ಟ್ ಖಡಕ್ ಸೂಚನೆ !

26/03/2026 7:45 AM

Ram Navami 2025 : ಶ್ರೀರಾಮ ನವಮಿಯ ಶುಭ ಮುಹೂರ್ತ, ಮಹತ್ವ, ಪೂಜೆ ವಿಧಾನದ ಸಂಪೂರ್ಣ ಮಾಹಿತಿ

26/03/2026 7:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.