Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜಸ್ಥಾನ ರಿಫೈನರಿ ಉದ್ಘಾಟನೆ ಮುಂದೂಡಿಕೆ: ಅಗ್ನಿ ಅವಘಡದ ಬೆನ್ನಲ್ಲೇ ಕೇಂದ್ರದ ತೀರ್ಮಾನ; ಭದ್ರತಾ ಲೋಪದ ಬಗ್ಗೆ ತನಿಖೆಗೆ ಆದೇಶ!

20/04/2026 8:02 PM

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ಭಾಷಣದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

20/04/2026 7:58 PM

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

20/04/2026 7:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮತಗಳ್ಳತನದ ಮೂಲಕ `BJP’ ಅನೇಕ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ : CM ಸಿದ್ದರಾಮಯ್ಯ
KARNATAKA

BREAKING : ಮತಗಳ್ಳತನದ ಮೂಲಕ `BJP’ ಅನೇಕ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ : CM ಸಿದ್ದರಾಮಯ್ಯ

By kannadanewsnow5708/11/2025 3:51 PM

ಬೆಂಗಳೂರು : ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳಾಗಿದೆ. ಚುನಾವಣಾ ಆಯೋಗ – ಸಿಬಿಐ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಮತಗಳ್ಳತನದ ಮೂಲಕ ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ ಮತ್ತು ಲೋಕಸಭೆಯಲ್ಲಿ ಕೂಡ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ನಿರಂತರ ಅಧ್ಯಯನ, ತಪಾಸಣೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ಎಂದರು.

ಸಂವಿಧಾನಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ಪ್ರಜಾಪ್ರಭುತ್ವಕ್ಕೆ ಎಸಗಿದ ವಂಚನೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ನಡೆದ ಮತಗಳ್ಳತನವನ್ನು ದಾಖಲೆ ಸಮೇತ ಬಯಲಿಗೆ ಎಳೆದು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ ಎಂದು ಹೇಳಿದರು.

ಚುನಾವಣಾ ಆಯೋಗಕ್ಕೆ ಸ್ವತಂತ್ರ ಸಂಸ್ಥೆಯ ಸ್ಥಾನಮಾನವನ್ನು ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದಾರೆ. ಪ್ರಭುತ್ವ ಚುನಾವಣಾ ಪ್ರಕ್ರಿಯಿಯಲ್ಲಿ ಮೂಗು ತೂರಿಸಬಾರದು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ನಮ್ಮ ಸಂವಿಧಾನವು ರೂಪಿಸಿದೆ. ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ ಎಂದರು.

ಆದ್ದರಿಂದ ನಾವು ಸಂವಿಧಾನದ ಮತ್ತು ಪ್ತಜಾಪ್ರಭುತ್ವ ಕಾಪಾಡಲು ಕಾಂಗ್ರೆಸ್ ಪಕ್ಷದಿಂದ ಕೋಟಿಗೂ ಅಧಿಕ ಮಂದಿಯ ಸಹಿ ಸಂಗ್ರಹ ಮಾಡಿದ್ದೇವೆ. ಇದನ್ನು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೂ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಶ್ರೀ @narendramodi ಅವರು ಪ್ರಧಾನಿ ಆದ ಬಳಿಕ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳಾಗಿದೆ. ಚುನಾವಣಾ ಆಯೋಗ – ಸಿಬಿಐ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ.

ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು… pic.twitter.com/i1bkcz60WX

— Siddaramaiah (@siddaramaiah) November 8, 2025

BREAKING: It is clear that `BJP' came to power in many states through vote rigging: CM Siddaramaiah
Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

20/04/2026 7:54 PM3 Mins Read

ಮಂಡ್ಯದಲ್ಲಿ ಬಸವಣ್ಣರವರ ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ; ಮದ್ದೂರು ತಾಲೂಕು ಕಛೇರಿ ಮುಂದೆ ಪ್ರತಿಭಟನೆ

20/04/2026 7:49 PM2 Mins Read

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

20/04/2026 7:37 PM2 Mins Read
Recent News

ರಾಜಸ್ಥಾನ ರಿಫೈನರಿ ಉದ್ಘಾಟನೆ ಮುಂದೂಡಿಕೆ: ಅಗ್ನಿ ಅವಘಡದ ಬೆನ್ನಲ್ಲೇ ಕೇಂದ್ರದ ತೀರ್ಮಾನ; ಭದ್ರತಾ ಲೋಪದ ಬಗ್ಗೆ ತನಿಖೆಗೆ ಆದೇಶ!

20/04/2026 8:02 PM

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ಭಾಷಣದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

20/04/2026 7:58 PM

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

20/04/2026 7:54 PM

‘ಸೀರೆ ಎಳೆದಾಡುತ್ತಿದ್ದ, ತೊಡೆಯ ಮೇಲೆ ಕೈ ಹಾಕುತ್ತಿದ್ದ’: ನಾಸಿಕ್ ಟಿಸಿಎಸ್ ಉದ್ಯೋಗಿಯಿಂದ ಕಿರುಕುಳದ ಭಯಾನಕ ವಿವರ ಬಯಲು!

20/04/2026 7:53 PM
State News
KARNATAKA

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

By kannadanewsnow0920/04/2026 7:54 PM KARNATAKA 3 Mins Read

ಹುಬ್ಬಳ್ಳಿ: ಇಂದಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನ ಎಷ್ಟು ವರದಾನವೋ, ಅಷ್ಟೇ ಶಾಪವಾಗಿಯೂ ಪರಿಣಮಿಸುತ್ತಿದೆ. ಸಣ್ಣದೊಂದು ವಿಡಿಯೋ ಎಡಿಟಿಂಗ್ ಮೂಲಕ ಜನರನ್ನು…

ಮಂಡ್ಯದಲ್ಲಿ ಬಸವಣ್ಣರವರ ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ; ಮದ್ದೂರು ತಾಲೂಕು ಕಛೇರಿ ಮುಂದೆ ಪ್ರತಿಭಟನೆ

20/04/2026 7:49 PM

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

20/04/2026 7:37 PM

JOB FAIR: ನಾಳೆ ಮಂಡ್ಯದ ಮದ್ದೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’: 5,000ಕ್ಕೂ ಹೆಚ್ಚು ಉದ್ಯೋಗಾವಕಾಶ

20/04/2026 7:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.