ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಾರಿ ನಿರ್ದೇಶನಾಲಯ ವಿಸ್ತೃತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಈ ಒಂದು ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ಕೈವಾಡ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹೌದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ವಿಚಾರಕ್ಕೆ ಸಂಬಂಧಪಟ್ಟಂತೆ ಇಡಿ ಈಗ ವಿಸ್ತೃತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, 89.65 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯದಿಂದ ವಿಸ್ತೃತ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಹಗರಣ ಸಂಬಂಧ ನಾವು ನಾಲ್ಕು ರಾಜ್ಯಗಳ 23 ಕಡೆಗೆ ದಾಳಿ ನಡೆಸಿದ್ದೇವೆ. 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ.ನಂತರ ಹಲವು ನಕಲಿ ಅಕೌಂಟ್ ಗಳಿಗೆ ಹೋಗಿ ಕ್ಯಾಶ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಬಸನಗೌಡ ಗದ್ದಲ್ ಮನೆಯಲ್ಲಿ ದಾಖಲೆ ಪತ್ತೆಯಾಗಿದೆ.
ಈ ಹಣವನ್ನು ಚುನಾವಣೆ ಹಾಗೂ ಐಷಾರಾಮಿ ಕಾರು ಖರೀದಿಸಲು ಬಳಕೆ ಮಾಡಿಕೊಂಡಿದ್ದಾರೆ. ಇದೇ ಹಣದಲ್ಲಿ ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡಿರುವ ಆರೋಪ ಕೇಳಿ ಬಂದಿದೆ.ಅಲ್ಲದೆ ಚುನಾವಣೆಯಲ್ಲಿ ನಿಗಮದ ಹಣವನ್ನು ಮದ್ಯ ಖರೀದಿಸಲು ಬಳಸಲಾಗಿದೆ. ಅವ್ಯವಹಾರ ಸಂಬಂಧ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.