ಬೆಂಗಳೂರು : ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಟ್ಟಡಗಳ ಮೇಲೆ ದೀಪಾಲಂಕಾರ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ:23.01.2025ರಂದು ನಡೆದ ಸಭೆಯಲ್ಲಿ ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಇವರು ದಿನಾಂಕ:27.01.2025 ರಂದು ಸಂಜೆ:4.30 ಗಂಟೆಗೆ ಅನಾವರಣ ಮಾಡುವುದರಿಂದ, ದಿನಾಂಕ:27.01.2025ರ ಸಂಜೆಯಿಂದ ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಟ್ಟಡಗಳ ಮೇಲೆ ದೀಪಾಲಂಕಾರದ ವ್ಯವಸ್ಥೆ ಮಾಡುವಂತೆ ತಿಳಿಸಿರುತ್ತಾರೆ.
ಕಾರ್ಯಕ್ರಮವು ಐತಿಹಾಸಿಕ ಕಾರ್ಯಕ್ರಮವಾಗಿರುವುದರಿಂದ, ದಿನಾಂಕ:27.01.2025ರ ಸಂಜೆ 4.30 ಗಂಟೆಗೆ ಜರಗುವ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮದ ಅಂಗವಾಗಿ ದಿನಾಂಕ:27.01.2025ರ ಸಂಜೆಯಿಂದ ಬೆಂಗಳೂರಿನಲ್ಲಿರುವ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಚೇರಿ / ಕಟ್ಟಡಗಳ ಮೇಲೆ ದೀಪಾಲಂಕಾರದ ವ್ಯವಸ್ಥೆ ಮಾಡಲು ಅಧೀನ ಕಛೇರಿಗಳಿಗೆ ಅಗತ್ಯ ಸೂಚನೆ ನೀಡಲು ಕೋರಿದೆ.