ಬೆಂಗಳೂರು : ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿರುವ ಉದ್ಯಮಿಗಳಿಗೆ ಹಾಗೂ ಬಿಲ್ಡರ್ ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಉದ್ಯಮಿ ಮತ್ತು ಬಿಲ್ಡರ್ ಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಹೌದು ಬೆಂಗಳೂರಿನಲ್ಲಿ ಉದ್ಯಮಿಗಳಿಗೆ ಐಟಿ ಶಾಕ್ ನೀಡಿದ್ದು, 25 ಹೆಚ್ಚು ಕಡೆ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಉದ್ಯಮಿಗಳು ಬಿಲ್ಡರ್ ಗಳ ಮನೆ ಹಾಗೂ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.