ಬೆಂಗಳೂರು : ಬೆಂಗಳೂರಿನಲ್ಲಿ ಪ್ರೆಸ್ಟೀಜ್ ಗ್ರೂಪ್ ಕಚೇರಿ ಮೇಲೆ ಐಟಿ ದಾಳಿ ಎಂಡಿ ರಸ್ತೆಯಲ್ಲಿರುವ ಮುಖ್ಯ ಕಚೇರಿ ಸೇರಿದಂತೆ ನಾಲ್ಕು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಚೇರಿ ಮೇಲೆ ನಾಲ್ಕು ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು ಸುಮಾರು 50ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ, ಪ್ರೆಸ್ಟೀಜ್ ಗ್ರೂಪ್ ಕಚೇರಿಯ ಮೇಲೆ ನಾಲ್ಕು ತಂಡಗಳನ್ನು ಒಳಗೊಂಡ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದೆ. ಈ ಗ್ರೂಪ್ ನಿಂದ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ದಾಳಿ ಮಾಡಿ ತಪಾಸಣೆ ನಡೆಸಲಾಗುತ್ತದೆ. ಅಪಾರ್ಟ್ಮೆಂಟ್ ನಿರ್ಮಾಣ ಸೇರಿ ಹಲವು ಉದ್ಯಮಗಳನ್ನು ಪ್ರೆಸ್ಟೀಜ್ ಗ್ರೂಪ್ ಹೊಂದಿದೆ. ಪ್ರೆಸ್ಟೀಜ್ ಗ್ರೂಪ್ ಗೆ ಸಂಬಂಧಿಸಿದಂತೆ ನಾಲ್ಕು ಕಡೆ ಏಕಾಏಕಿ ದಾಳಿ ಮಾಡಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.