ಬೆಂಗಳೂರಿನಲ್ಲಿ : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಉದ್ಯಮಿ, ಬಿಲ್ಡರ್ ಗಳಿಗೆ ಐಟಿ ಶಾಕ್ ನೀಡಿದ್ದು, ಬೆಂಗಳೂರಿನ 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಉದ್ಯಮಿ, ಬಿಲ್ಡರ್ ಗಳ ನಿವಾಸ,ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.
ನಗರದ ಸುಮಾರು 25 ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದ್ದು, ಆಸ್ತಿ ಪಾಸ್ತಿ ಹಾಗೂ ನಗದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.