ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಬಿಲ್ಡರ್ ಗಳಿಗೆ ಐಟಿ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಹಲವು ಬಿಲ್ಡರ್ ಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಬೆಂಗಳೂರಿನ ಕೆ.ಆರ್ ಪುರಂ, ಕೊಡಿಗೇಹಳ್ಳಿ ಸೇರಿದಂತೆ 20 ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಬಿಲ್ಡರ್ ಗಳು ತೆರಿಗೆ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.