ವಿಜಯನಗರ : ಬೆಂಗಳೂರಿನಲ್ಲಿ ರಾಕ್ಷಸರು ಹಸುವಿನ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸುಗಳ ಕೆಚ್ಚಲು ಕೊಯ್ದಿರುವುದು ತಪ್ಪು. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ ಎಂದು ತಿಳಿಸಿದರು.
ಇಂದು ವಿಜಯನಗರ ಜಿಲ್ಲೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಪ್ರಕರಣದ ಕುರಿತು ಮಾತನಾಡಿದ ಅವರು, ಘಟನೆ ಕುರಿತು ಈಗಾಗ್ಲೇ ಕಮಿಷನರ್ ಜೊತೆಗೆ ಮಾತನಾಡಿದ್ದೇನೆ. ಯಾರು ಅಂತ ಪತ್ತೆಹಚ್ಚಲು ಕಮಿಷನರಿಗೆ ತಿಳಿಸಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ ಎಂದು ಅವರು ತಿಳಿಸಿದರು.
ಯಾರು ತಪ್ಪು ಮಾಡಿದ್ದಾರೋ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲೇಬೇಕು. ಯಾರು ಮಾಡಿದ್ದಾರೆ ಅಂತ ನನಗೆ ಗೊತ್ತಿಲ್ಲ. ಅದಕ್ಕೆ ಹಿಂದೂ ಸಂಘಟನೆಗಳು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಆ ರೀತಿ ಮಾಡಬಾರದು. ತಪ್ಪಿತಸರಿಗೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.