ಚೆನ್ನೈ : ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಮಲ್ ಹಾಸನ್ ಮತ್ತೆ ಉದ್ಧಟತನ ಮೆರೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷಮೆಯಾಚಿಸುವ ತಪ್ಪು ನಾನು ಮಾಡಿಲ್ಲ ಎಂದು ಹೇಳುವ ಮೂಲಕ ಮತ್ತೊಮ್ಮೆ ಉದ್ಧಟತನ ಪ್ರದರ್ಶಿಸಿದ್ದಾರೆ.
ನನ್ನಿಂದ ತಪ್ಪಾಗಿಲ್ಲ. ನಾನು ಕ್ಷಮೆ ಕೇಳಲ್ಲಿ. ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ನಾನು ಕಾನೂನು ಮತ್ತು ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ.