ಶ್ರೀನಗರ :ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದೆ. ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆ ಇದೆ. ಜೈ ಹಿಂದ್! ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Proud of our Armed Forces. Jai Hind!
— Rahul Gandhi (@RahulGandhi) May 7, 2025
ಈ ದಾಳಿಗಳಲ್ಲಿ ಸುಮಾರು 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು 55 ಮಂದಿ ಗಾಯಗೊಂಡಿದ್ದಾರೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ, ಫ್ರಾನ್ಸ್‌ನಿಂದ ಆಮದು ಮಾಡಿಕೊಂಡ ರಫೇಲ್ ಯುದ್ಧ ವಿಮಾನವನ್ನು ಬಳಸಲಾಯಿತು. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಸ್ಥಳಗಳು ಇವುಗಳೇ. ಪಾಕಿಸ್ತಾನದ ಸ್ಥಳೀಯ ವರದಿಗಳ ಪ್ರಕಾರ, ಬಹಾವಲ್ಪುರದಲ್ಲಿ ನಡೆದ ವಾಯುದಾಳಿಯ ನಂತರ 30 ಜನರು ಸಾವನ್ನಪ್ಪಿದ್ದಾರೆ. ಲಷ್ಕರ್ ಮತ್ತು ಜೈಶ್‌ನ ಪ್ರಧಾನ ಕಚೇರಿಗಳು ನಾಶವಾಗಿವೆ. ಪಾಕಿಸ್ತಾನದ ಅಂತರ ಸೇವೆಗಳ ಸಾರ್ವಜನಿಕ ಸಂಪರ್ಕ (ISPR) ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಭಾರತ 24 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಹೇಳಿದರು.