ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಇದೀಗ ಬಳ್ಳಾರಿ ಜೈಲ್ನಲ್ಲಿ ಬೆನ್ನು ನೋವಿನಿಂದ ತೀವ್ರವಾಗಿ ಅವರು ನೋವು ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಜೈಲಲ್ಲೇ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಈಗಾಗಲೇ ಬೆನ್ನಿನ ಹಿಂಭಾಗದಲ್ಲಿ ಊತ ಬಂದಿರುವ ಸಾಧ್ಯತೆ ಇದೆ. ಅವರಿಗೆ ಸರ್ಜರಿ ಮಾಡಿಸಲೇಬೇಕಾದ ಅಗತ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದರ್ಶನ್ಗೆ ಸ್ಕ್ಯಾನ್ ಮಾಡಿಸಲು ವೈದ್ಯರು ಸೂಚನೆ ನೀಡಿದ್ದಾರೆ.
ಈ ವೇಳೆ ನಟ ದರ್ಶನವರು ನಾನು ಬೆಂಗಳೂರಿಗೆ ಹೋದ ಮೇಲೆ ಸ್ಕ್ಯಾನ್ ಮಾಡಿಸಿಕೊಳ್ಳುತ್ತೇನೆ ಸದ್ಯಕ್ಕೆ, ನಾವು ಕಡಿಮೆಯಾಗುವಂತಹ ಯಾವುದಾದರೂ ಮಾತ್ರೆ ಇದ್ರೆ ಕೊಡಿ ಎಂದು ವೈದ್ಯರಿಗೆ ತಿಳಿಸಿದ್ದಾರೆ. ಹಾಗಾಗಿ ನಟ ದರ್ಶನ್ ಸದ್ಯ ಈ ಒಂದು ಬೆನ್ನು ನೋವಿನಿಂದ ಬಳಲುತ್ತಿರುವುದು ತಿಳಿದುಬಂದಿದೆ.
ಇನ್ನೊಂದೆಡೆ ದರ್ಶನವರು ಜಾಮೀನು ಅರ್ಜಿ ಸಲ್ಲಿಸಿದ್ದು, ನಾಳೆ ಈ ಒಂದು ಅರ್ಜಿಯ ವಿಚಾರಣೆ ನಡೆಯಲಿದೆ. ಇಲ್ಲಿಯವರೆಗೂ ದರ್ಶನ್ ಪರ ವಕೀಲರು ನಮಗೆ ಕಾಲಾವಕಾಶ ನೀಡಿ ಎಂದು ಹೇಳುತ್ತಾ ದಿನಾಂಕವನ್ನು ಮುಂದುವಡುತ್ತಾ ಬಂದಿದ್ದರು.ಹಾಗಾಗಿ ನಾಳೆ ನಟ ದರ್ಶನ್ ಅವರ ಭವಿಷ್ಯ ನಿರ್ಧಾರವಾಗಲಿದೆ.