ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಶ್ರೀರಾಮುಲು ಅವರು ಸಂಡೂರು ಚುನಾವಣೆಯ ಕುರಿತು ಲಘುವಾಗಿ ಮಾತನಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಘೇಂದ್ರ ಹಾಗೂ ಶ್ರೀರಾಮುಲು ನಡುವೆ ವಾಗ್ವಾದ ನಡೆದಿದ್ದು, ಸಭೆಯಲ್ಲಿ ನಡೆದಂತಹ ಈ ಒಂದು ಜಟಾಪಟಿ ಇದೀಗ ಹೈಕಮಾಂಡ್ ಅಂಗಳಕ್ಕೂ ತಲುಪಿದೆ. ಇದೀಗ ಜನಾರ್ದನ ರೆಡ್ಡಿ ಅವರು ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಪೋಟಕವಾದ ಆರೋಪ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ನಾನು ಪಕ್ಷದ ಅಭ್ಯರ್ಥಿಯಾಗಿ ಕೆಲಸ ಮಾಡಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕೇಳಿದರೆ ನನ್ನ ಕೆಲಸದ ಬಗ್ಗೆ ಜನರು ಹೇಳುತ್ತಾರೆ. ನಾನು ಕೆಲಸ ಮಾಡಿಲ್ಲ ಅಂತ ಜನಾರ್ಧನ್ ರೆಡ್ಡಿ ಹೇಳಿರುವುದು ಸ್ಪಷ್ಟವಾಗಿದೆ. ನನ್ನ ಕುಟುಂಬದ ವಿರುದ್ಧ ಸೇಡು ತೀರಿಸಿಕೊಳ್ಳಲು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ಧನ ರೆಡ್ಡಿ ಪ್ರಯತ್ನಿಸಿದ್ದಾರೆ. ಎಂದು ಜನಾರ್ಧನ್ ರೆಡ್ಡಿ ವಿರುದ್ಧ ಮಾರಿ ಸಚಿವ ಶ್ರೀರಾಮುಲು ಗಂಭೀರವಾದ ಆರೋಪ ಮಾಡಿದರು.
ಜನಾರ್ಧನ್ ರೆಡ್ಡಿ ಮಾತು ಕೇಳಿ ನನ್ನ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಪಕ್ಷದಲ್ಲಿ ಜನಾರ್ದನ ರೆಡ್ಡಿ ಅಂದುಕೊಂಡಂತೆ ನಡೆಯಬೇಕೆಂಬ ಮನಸ್ಥಿತಿ ಇದೆ. ನನ್ನ ಬಗ್ಗೆ ರೆಡ್ಡಿ ಯಾಕೆ ಕೆಟ್ಟದಾಗಿ ಮಾತಾಡುತ್ತಿದ್ದಾರೆ ನನಗೆ ಗೊತ್ತಿಲ್ಲ. ಸಭೆಯಲ್ಲಿ ಜನಾರ್ಧನ ರೆಡ್ಡಿ ಯಾಕೆ ನನ್ನ ಬಗ್ಗೆ ಮಾತನಾಡಲಿಲ್ಲ. ನನ್ನ ಹೃದಯಕ್ಕೆ ಗಾಯ ಮಾಡುವ ಕೆಲಸ ಮಾಡಿದ್ದಾರೆ. ರಾಧಾ ಮೋಹನ್ ದಾಸ್ ಆರೋಪದಿಂದ ನನಗೆ ನೋವಾಗಿದೆ. ನಾನು ಕೆಲಸ ಮಾಡಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ನನ್ನ ಬಗ್ಗೆ ತಿಳಿದುಕೊಂಡು ಅವರು ಮಾತನಾಡಬೇಕಿತ್ತು ಎಂದರು.
ಸಂಡೂರು ಕ್ಷೇತ್ರದಲ್ಲಿ ನಾನು ಚೆನ್ನಾಗಿ ಕೆಲಸ ಮಾಡಿದ್ದೇನೆ ಮೋಸ ಮಾಡಿ ನಾನು ಎಂದಿಗೂ ಕೆಲಸ ಮಾಡಿಲ್ಲ. ರಾಧಾ ಮೋಹನ್ದಾಸ್ ಅವರು ಉತ್ತರ ಪ್ರದೇಶದವರು. ಇಲ್ಲಿನ ಕೆಲವು ವಿಚಾರಗಳು ಅವರಿಗೆ ಗೊತ್ತಿರುವುದಿಲ್ಲ. 30 ವರ್ಷದ ರಾಜಕಾರಣದಲ್ಲಿ ನನ್ನ ವಿರುದ್ಧ ಯಾವುದೇ ಆರೋಪವಿಲ್ಲ. ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಒಳ್ಳೆಯದಲ್ಲ ಅಂತ ಹೇಳಿದ್ದೇನೆ ಸಭೆಯಲ್ಲಿ ಈ ವಿಚಾರವನ್ನು ರಾಜ್ಯಾಧ್ಯಕ್ಷರಿಗೆ ಹೇಳಿದ್ದೇನೆ. ನನಗೆ ಸಂಕಟ ಆಗಿದ್ದಕ್ಕೆ ನಾನು ಪಕ್ಷ ಬಿಡುವುದಾಗಿ ಹೇಳಿದ್ದೇನೆ. ಆದರೆ ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ನನ್ನ ಮನಸ್ಸಿನಲ್ಲಿ ಆ ಬಗ್ಗೆ ನೋವು ಇದೆ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದರು.