ರಾಯಚೂರು : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ಬಯಲಿಗೆ ಬಂದಿದ್ದು, ಬಯಲು ಶೌಚಕ್ಕೆ ಹೋದ ಮಹಿಳೆ ಮೇಲೆ ಜೆಸಿಬಿ ಚಾಲಕ ಮಣ್ಣಿನ ರಾಶಿ ಹಾಕಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಚೂರು ನಗರದ ಆಶಾಪುರ ರಸ್ತೆಯ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಬಯಲು ಶೌಚಕ್ಕೆ ಹೋದ ಮಹಿಳೆ ಮೇಲೆ ಜೆಸಿಬಿ ಚಾಲಕ ಮಣ್ಣಿನ ರಾಶಿ ಹಾಕಿದ ಪರಿಣಾಮ ಮಹಿಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ತಾಯಮ್ಮ (32) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಸಿಬಿ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ.’