ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂ ಬೆಳ್ಳಿಗ್ಗೆ ಜೆಸಿಬಿ ಘರ್ಜನೆ ಮಾಡಿದ್ದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜಾಗವನ್ನು ಒತ್ತೋರಿ ಮಾಡಿದ್ದ ಸುಮಾರು 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಲಾಗಿದೆ.
ಹೌದು ಇಂದು ಬೆಳಿಗ್ಗೆ ಪಾಲಿಕೆ ಜಾಗವನ್ನ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ 200 ಮನೆಗಳನ್ನ ಜೆಸಿಬಿಗಳ ಮೂಲಕ ತೆರವುಗೊಳಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.6 ಜೆಸಿಬಿ, 300 ಪೊಲೀಸ್ ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ನಡೆಸುತ್ತಿದೆ.
ಶ್ರೀನಿವಾಸಪುರದ ಕೋಗಿಲು ಲೇಔಟ್‌ನಲ್ಲಿರುವ ಈ ಗೋಮಾಳ ಜಾಗವನ್ನ ಜಿಲ್ಲಾಡಳಿತ ನಗರ ಪಾಲಿಕೆಗೆ ನೀಡಿತ್ತು. ಆದ್ರೆ ಜಾಗವನ್ನ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಲಾಗಿತ್ತು. ಹೀಗಾಗಿ ಒತ್ತುವರಿ ಮಾಡಿ ನಿರ್ಮಿಸಲಾಗಿರುವ 200 ಮನೆಗಳನ್ನ ನೆಲಸಮಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.








