ಬೆಂಗಳೂರು : ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಇದೀಗ ರಾಜ್ಯದ ಮೂರು ಕ್ಷೇತ್ರಗಳಾದ ಮಂಡ್ಯ, ಹಾಸನ ಕೋಲಾರಕ್ಕೆ ಜೆಡಿಎಸ್ ಅಭ್ಯರ್ಥಿ ಗಳನ್ನು ಘೋಷಣೆ ಮಾಡಿದ್ದು, ಮಂಡ್ಯದಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಹಾಸನದಿಂದ ಪ್ರಜ್ವಲ್ ರೇವಣ್ಣ ಅದೇ ರೀತಿಯಾಗಿ ಕೋಲಾರದಿಂದ ಮಹೇಶ್ ಬಾಬು ಸ್ಪರ್ಧೆ ಮಾಡಲಿದ್ದಾರೆ.
ಇಂದು ಮದ್ಯಾಹ್ನ ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಅವರು, ಇಂದು ಸಂಜೆ 4 ಅಥವಾ 5 ಗಂಟೆಯ ನಂತರ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇದೀಗ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್ ಘೋಷಣೆ ಮಾಡಿದೆ.
ಅಲ್ಲದೆ ಹಾಸನದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಕೋಲಾರ ಕ್ಷೇತ್ರದ ಅಭ್ಯರ್ಥಿಯಾಗಿ ಮಲ್ಲೇಶ್ ಬಾಬು ಅವರು, ಸ್ಪರ್ಧಿಸಲಿದ್ದಾರೆ ಕೋಲಾರಕ್ಕೆ ಮಲ್ಲೇಶ್ ಬಾಬು ಸ್ಪರ್ಧಿಯಾಗಿರುವಾಗ ಬೇರೆ ಅಭ್ಯರ್ಥಿ ಅವಶ್ಯಕತೆ ಇಲ್ಲ ಎಂದು ಹಾಸನದಲ್ಲಿ ಎಚ್ ಡಿ ದೇವೇಗೌಡರು ಮಾಧ್ಯಮಗಳ ಮುಂದೆ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.