ಬೆಂಗಳೂರು : ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಈ ನಡುವೆ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಶಾಸಕ ಜಿ.ಟಿ. ದೇವೇಗೌಡರನ್ನು ಕೈ ಬಿಡಲಾಗಿದೆ.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿರುವ ಜಿ.ಟಿ. ದೇವೇಗೌಡರನ್ನು ಇದೀಗ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿದೆ. ಜಿಡಿಎಲ್ ಪಿ ನಾಯಕ ಸ್ಥಾನ ಸಿಗದಿದ್ದಕೆ ಬೇಸರಗೊಂಡಿದ್ದ ಜಿ.ಟಿ. ದೇವೇಗೌಡ ಸಿಎಂ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದರು.
ದಸರಾ ಮಹೋತ್ಸವದಲ್ಲಿ ಮಾತನಾಡಿದ ಜಿ.ಟಿ. ದೇವೇಗೌಡ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ. ಎಫ್ ಐಆರ್ ಆದ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾ? ಎಂದು ಸಿಎಂ ಪರ ಮಾತನಾಡಿದ್ದರು.