ಬೆಂಗಳೂರು : ವಿಧಾನಸಭಾ ಉಪಚುನಾವಣೆಗೆ ಜೆಡಿಎಸ್ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ ಆಗಿದ್ದು, ಹೆಚ್ ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿಗೆ ಸ್ಥಾನ ನೀಡಲಾಗಿದ್ದು, ಜಿ.ಟಿ.ದೇವೇಗೌಡಗೆ ಕೊಕ್ ನೀಡಲಾಗಿದೆ.
40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಕುಮಾರಸ್ವಾಮಿ ವಿರುದ್ಧವೇ ವಾಗ್ಧಾಳಿ ನಡೆಸಿ ಸಿಎಂ ಸಿದ್ದರಾಮಯ್ಯರನ್ನು ಹೊಗಳಿದ್ದ ಜಿಟಿ ದೇವೇಗೌಡರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಹೆಚ್ ಡಿ ರೇವಣ್ಣ, ಅನಿತಾ ಕುಮಾರಸ್ವಾಮಿ ಅವರಿಗೆ ಸ್ಥಾನ ನೀಡಲಾಗಿದೆ.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿರುವ ಜಿ.ಟಿ. ದೇವೇಗೌಡರನ್ನು ಇದೀಗ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿದೆ. ಜಿಡಿಎಲ್ ಪಿ ನಾಯಕ ಸ್ಥಾನ ಸಿಗದಿದ್ದಕೆ ಬೇಸರಗೊಂಡಿದ್ದ ಜಿ.ಟಿ. ದೇವೇಗೌಡ ಸಿಎಂ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದರು. ದಸರಾ ಮಹೋತ್ಸವದಲ್ಲಿ ಮಾತನಾಡಿದ ಜಿ.ಟಿ. ದೇವೇಗೌಡ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ. ಎಫ್ ಐಆರ್ ಆದ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾ? ಎಂದು ಸಿಎಂ ಪರ ಮಾತನಾಡಿದ್ದರು.