ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಜಯಂ ಎಫ್ ಸಿ ಕೋರ್ಟ್ ನಲ್ಲಿ ಸಿಟಿ ರವಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಇದೀಗ ನ್ಯಾಯಾಧೀಶರು ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಸಿ ಟಿ ರವಿ ವಿರುದ್ಧ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿ ಎಂದು ಬೆಳಿಗ್ಗೆ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಸಿಟಿ ರವಿ ಅವರ ಪರ ವಕೀಲ ಎಂಬಿ ಜಿರಲಿ ಅವರು ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಬಳಿಕ ಜಡ್ಜ್ ಮದ್ಯಾಹ್ನ 3 ಗಂಟೆಗೆ ವಿಚಾರಣೆ ಒಂದುಡಿ ಆದೇಶ ಹೊರಡಿಸಿದ್ದರು.
ಆದರೆ ಇದೀಗ ಬಂದ ಮಾಹಿತಿಗಳ ಪ್ರಕಾರ ಸಿ ಟಿ ರವಿ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಳಗಾವಿಯ ಜೆಎಂಎಫ್‌ಸಿ ಕೋರ್ಟ್ ನ ಜಡ್ಜ್ ಡಿಸೋಜಾ ಅವರು ಈ ಒಂದು ಆದೇಶ ಹೊರಡಿಸಿದ್ದಾರೆ. ಆದೇಶ ಹೊರಬೀಳುತ್ತಿದ್ದಂತೆ ಕೋರ್ಟ್ ಹಾಲ್ನಲ್ಲಿ ಸಿಟಿ ರವಿ ಅವರನ್ನು ಪೊಲೀಸರು ಸುತ್ತುವರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ ಎನ್ನಲಾಗಿದೆ.