ನವದೆಹಲಿ : ಹಿರಿಯ ಬಿಜೆಪಿ ನಾಯಕ ಮತ್ತು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ರಾಜ್ಯಸಭೆಯಲ್ಲಿ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಇಂಡಿಯಾ ಬ್ಲಾಕ್ ಸದಸ್ಯರು ‘ಸಂವಿಧಾನ ಉಳಿಸಿ’ ಕರೆ ನೀಡಿದ್ದಾರೆ.
ಅಂದ್ಹಾಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಸೇರಿದಂತೆ ಅವರ ಮಂತ್ರಿಮಂಡಲದ ಸದಸ್ಯರು 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯ ಭರ್ತೃಹರಿ ಮಹತಾಬ್ ಅವರು ಸದನದ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಬಾರಿ ಎನ್ಡಿಎ 293 ಸ್ಥಾನಗಳೊಂದಿಗೆ ಬಹುಮತವನ್ನ ಹೊಂದಿದ್ದರೆ, ಬಿಜೆಪಿ 240 ಸ್ಥಾನಗಳನ್ನು ಹೊಂದಿದೆ. ಪ್ರತಿಪಕ್ಷ ಬಿಜೆಪಿ 234 ಸ್ಥಾನಗಳನ್ನು ಹೊಂದಿದೆ.
ಪ್ರಧಾನಿಯವರ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ವಿರೋಧ ಪಕ್ಷದ ಸದಸ್ಯರು ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು ಎದ್ದು ನಿಂತರು. ಗೃಹ ಸಚಿವ ಅಮಿತ್ ಶಾ ಪ್ರಮಾಣ ವಚನ ಸ್ವೀಕರಿಸುವಾಗ ಅವರು ಮತ್ತೆ ಸಂವಿಧಾನದ ಪ್ರತಿಗಳನ್ನ ಎತ್ತಿ ಹಿಡಿದರು.
‘ಅರವಿಂದ್ ಕೇಜ್ರಿವಾಲ್’ಗೆ ಸಧ್ಯಕ್ಕಿಲ್ಲ ರಿಲೀಫ್ ; ಜಾಮೀನು ಅರ್ಜಿ ಬುಧವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?