ನವದೆಹಲಿ: ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಇಂದು ನಿವೃತ್ತರಾಗುತ್ತಿದ್ದಾರೆ. ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ ಭಾರತದ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭೂತಾನ್, ಮಾರಿಷಸ್ ಮತ್ತು ಬ್ರೆಜಿಲ್ ಸೇರಿದಂತೆ ಏಳು ದೇಶಗಳ ಮುಖ್ಯ ನ್ಯಾಯಮೂರ್ತಿಗಳು ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭಾಗವಹಿಸಲಿದ್ದಾರೆ.
ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಐತಿಹಾಸಿಕವಾಗಲಿದೆ. ಇತರ ದೇಶಗಳಿಂದ ಇಷ್ಟು ದೊಡ್ಡ ಸಂಖ್ಯೆಯ ನ್ಯಾಯಾಂಗ ನಿಯೋಗಗಳು ಸಿಜೆಐ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು.
ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನವೆಂಬರ್ 24 ರ ಸೋಮವಾರ ರಾಷ್ಟ್ರಪತಿ ಭವನದಲ್ಲಿ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭೂತಾನ್, ಕೀನ್ಯಾ, ಮಲೇಷ್ಯಾ, ಮಾರಿಷಸ್, ನೇಪಾಳ ಮತ್ತು ಶ್ರೀಲಂಕಾದ ಮುಖ್ಯ ನ್ಯಾಯಮೂರ್ತಿಗಳು ಮತ್ತು ಅವರ ಕುಟುಂಬ ಸದಸ್ಯರು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ವರದಿಯ ಪ್ರಕಾರ, ನವೆಂಬರ್ 24 ರ ಸೋಮವಾರದಂದು ನಡೆಯುವ ಪ್ರಮಾಣವಚನ ಸಮಾರಂಭದಲ್ಲಿ ಭೂತಾನ್‌ನಿಂದ ಶ್ರೀಲಂಕಾದವರೆಗೆ ಆರು ದೇಶಗಳ ಒಂದು ಡಜನ್‌ಗೂ ಹೆಚ್ಚು ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಮೂರ್ತಿಗಳು ಉಪಸ್ಥಿತರಿರುತ್ತಾರೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನವೆಂಬರ್ 24 ರ ಸೋಮವಾರ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.








