ತುಮಕೂರು : ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ವಜಾ ಮಾಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ತುಮಕೂರಿನಲ್ಲಿ ಅಭಿಮಾನಿಗಳು ವಜಾ ಹಿಂಪಡೆಯದಿದ್ದರೆ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಕೆ.ಎನ್. ರಾಜಣ್ಣ ತುಳಿಯುವ ಕೆಲಸ ಆಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಭಾರೀ ಬೆಲೆ ತೆರಬೇಕಾಗುತ್ತದೆ. ಇದು ಹಿಂದುಳಿದ ವರ್ಗಗಳಿಗೆ ಅನ್ಯಾಯವೆಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ತುಮಕೂರಿನ ಅಭಿಮಾನಿಗಳಿಂದ ಇಂದು ತುಮಕೂರಿನಲ್ಲಿ ಸಭೆ ನಡೆಸಲಾಗುದು.
ಇಂದಿನ ಸಭೆ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು. ಆದರೆ ಸಚಿವ ಸ್ಥಾನದಿಂದ ವಜಾ ಮಾಡಿರುವುದು ಸರಿಯಲ್ಲ. ಸಚಿವ ಸ್ಥಾನ ನೀಡದಿದ್ದರೆ ಬೃಹತ್ ಪ್ರತಿಭಟನೆ ಮಾಡಲಾಗುವುದು, ತುಮಕೂರು ಬಂದ್ ಸಹ ಮಾಡುತ್ತೇವೆಂದು ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ.