ತುಮಕೂರು : ಕಾಂಗ್ರೆಸ್ ಹೈ ಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಹಕಾರ ಸಚಿವ ಕೆಣರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ರಾಜ್ಯ ರಾಜಕಾರಣದಲ್ಲಿ ಭಾರಿ ದೊಡ್ಡ ಬದಲಾವಣೆ ಆಗಿದೆ. ಈ ನೆಲೆಯಲ್ಲಿ ಮಧುಗಿರಿ ತಾಲೂಕನ್ನು ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ಮಾಡಲು ಕೆ.ಎನ್ ರಾಜಣ್ಣ ಬೆಂಬಲಿಗರು ನಿರ್ಧರಿಸಿದ್ದಾರೆ.
ಆದರೆ ಇದೀಗ ಮಧುಗಿರಿ ತಾಲೂಕಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದ ಕೆ.ಎನ್ ರಾಜಣ್ಣ ಬೆಂಬಲಿಗರು ಇದೀಗ ಪ್ರತಿಭಟನೆಗೆ ಇಳಿದಿದ್ದಾರೆ. ರಸ್ತೆಯ ಮೇಲೆ ಅರೆಬೆತ್ತಲೆ ಆಗಿ ಪ್ರತಿಭಟನೆ ನಡೆಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಎಂದು ಇದೀಗ ಪ್ರತಿಭಟನೆ ಬೇರೆ ಸ್ವರೂಪ ಪಡೆದುಕೊಂಡಿದೆ. ಪ್ರಮುಖ ರಸ್ತೆಗಳಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಬಂದ್ ಮಾಡುತ್ತಿದ್ದಾರೆ.