ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ಜುಲೈ 29 ರಿಂದ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಗೆ ಸಂಬಂಧಿಸಿದಂತೆ ದಿನಾಂಕ 13.07.2024 ರಂದು ವಿವರವಾದ ಅಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಕೆಯನ್ನು ದಿನಾಂಕ 22.07.2024 ರಿಂದ ಪ್ರಾರಂಭಿಸಲಾಗುವುದೆಂದು ತಿಳಿಸಲಾಗಿರುತ್ತದೆ. ಆದರೆ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಕೆಯನ್ನು ಮುಂದೂಡಲಾಗಿದ್ದು ದಿನಾಂಕ 29.07.2024 ರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.