ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸುಖಧರೆ ಎಂಬ ಗ್ರಾಮದಲ್ಲಿ ಕಬ್ಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ (24) ಕಬ್ಬಡ್ಡಿ ಆಡುತ್ತಲೇ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಸುಖಧರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪ್ರೀತಮ್ ಶೆಟ್ಟಿ ತಡರಾತ್ರಿ ಸಾವನ್ನಪ್ಪಿದ್ದಾರೆ. ಪ್ರೀತಂ ಶೆಟ್ಟಿ ಉಡುಪಿ ಜಿಲ್ಲೆಯ ಹೆಬ್ರಿ ಮೂಲದ ನಿವಾಸಿ ಎಂದು ತಿಳಿದುಬಂದಿದೆ.
ನಿನ್ನೆ ಕಬಡ್ಡಿ ಪಂದ್ಯದಲ್ಲಿ ಭಾಗಿಯಾಗಿದ್ದ ಪ್ರೀತಂ ಶೆಟ್ಟಿ, ಬಳಿಕ ಕಬ್ಬಡ್ಡಿ ಆಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ನಿನ್ನೆ ಹನುಮ ಜಯಂತಿ ಹಿನ್ನೆಲೆಯಲ್ಲಿ ನಿನ್ನೆ ಕಬ್ಬಡ್ಡಿ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು. ಕಬಡ್ಡಿ ಪಂದ್ಯಾವಳಿಯಲ್ಲಿ ಭಗೀಯದ ಮುಗಿದ ಬಳಿಕ ಪ್ರೀತಂ ಶೆಟ್ಟಿ ಕಬ್ಬಡ್ಡಿ ಆಡುತ್ತಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಾಗಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ನಾಗಮಂಗಲದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ