ಶಿವಮೊಗ್ಗ : ಕಚೋರಿ ವ್ಯಾಪಾರಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ನಗರದ ಮುರುಡೇಶ್ವರ ದೇವಾಲಯದ ಬಳಿ ಘಟನೆ ನಡೆದಿದೆ.
ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕಸ್ತೂರ ಬಾ ರಸ್ತೆ ಮುರುಡೇಶ್ವರ ದೇವಸ್ಥಾನದ ಬಳಿ ಕಚೋರಿ ಮಾರುತ್ತಿದ್ದ ವ್ಯಕ್ತಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕಚೋರಿ ಮಾರಾಟ ಮಾಡುವ ಹೀರಾಲಾಲ್ ಎಂಬುವರಿಗೆ ವಿಳಾಸ ಕೇಳುವ ನೆಪದಲ್ಲಿ ಬಂದು ಚಾಕು ಇರಿದು ಪರಾರಿಯಾಗಿದ್ದಾರೆ.
ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೋಟೆ ಗಂಗೂರಿನ ವ್ಯಕ್ತಿಗಳು ಎನ್ನಲಾಗಿದ್ದು. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.