ಕಲಬುರ್ಗಿ : ಜಮೀನು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೃದ್ಧರೊಬ್ಬರನ್ನು ತಲ್ವಾರ್ ಇಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ತಾಲೂಕಿನ ಸೀತನೂರು ಗ್ರಾಮದ ಸೇತುವೆ ಬಳಿ ನಡೆದಿದೆ.
ಇಂದು ಬೆಳಿಗ್ಗೆ ಭೀಕರವಾಗಿ ಕೊಲೆ ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳಿಂದ ಶಿವರಾಯ ಮಾಲಿಪಾಟೀಲ್ (65) ಕೊಲೆಯಾಗಿದೆ. ಬೆಳಿಗ್ಗೆ ಜಮೀನು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ಒಂದು ಕೃತ್ಯ ನಡೆದಿದೆ ಹಳೆಯ ದ್ವೇಷ ಹಿನ್ನೆಲೆಯಲ್ಲಿ ಶಿವರಾಯ ಮಾಲಿಪಾಟೀಲ್ ಅನ್ನು ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿದ್ದು ಫರತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.