ಕಲಬುರ್ಗಿ : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಈಗಾಗಲೇ ವರುಣಾರ್ಭಟದಿಂದ ಕೆಲವು ಅವಾಂತರಗಳು ನಡೆದಿದ್ದು, ಇನ್ನೂ ಕೆಲವು ಭಾಗಗಳಲ್ಲಿ ಬಿಸಿಲಿನಿಂದ ಜನ ಬಸವಳಿದು ಹೋಗಿದ್ದಾರೆ. ಇದೀಗ ಕಲ್ಬುರ್ಗಿಯಲ್ಲಿ ಮತ್ತೆ 44.5 ಸೇಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಹೋಬಳಿಯಾಗಿರುವ ನಿಂಬರ್ಗಾ ತಾಂಡಾ ಮತ್ತು ಬೀದರ್ ಜಿಲ್ಲೆಯ ದಬಕ ಹೋಬಳಿಯಲ್ಲಿಅತಿ ಹೆಚ್ಚು 44.5°C ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಬೀದರ್ ಮತ್ತು ಕಲಬುರಗಿ ಜಿಲ್ಲೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಕೆಲವು ಸ್ಥಳಗಳು, ವಿಜಯಪುರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳು ರಾಜ್ಯದಾದ್ಯಂತ 40°C ಮತ್ತು ಅದಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ದಾಖಲಿಸಿವೆ ಎಂದು ಹೇಳಿದೆ.
KSNDMC ಹವಾಮಾನ ಮೇಲ್ವಿಚಾರಣಾ ಜಾಲದ ಪ್ರಕಾರ, ಬೀದರ್ ಮತ್ತು ಕಲಬುರಗಿ ಜಿಲ್ಲೆಯ ತಲಾ 10 ಸ್ಥಳಗಳು, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ತಲಾ 6 ಸ್ಥಳಗಳು ಮತ್ತು ವಿಜಯಪುರ ಜಿಲ್ಲೆಯ 1 ಸ್ಥಳವು ರಾಜ್ಯದಾದ್ಯಂತ 40°C ಮತ್ತು ಅದಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.