ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು ಈ ವೇಳೆ ರಾಜ ಭವನವನ್ನು ಪ್ರವೇಶಿಸಿದ ಕೂಡಲೇ ಪೊಲೀಸರು ಕನ್ನಡ ಪರ ಹೋರಾಟಗಾರ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.
ರಾಜ ಭವನಕ್ಕೆ ಕನ್ನಡಪರ ಹೋರಾಟಗಾರರಿಂದ ಮುತ್ತಿಗೆ ಯತ್ನಿಸಲಾಯಿತು. ಕನ್ನಡ ಪರ ಹೋರಾಟಗಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು. ಈ ವೇಳೆ ಮನವಿ ಕೊಡಲು ಬಂದಿದ್ದೇವೆ ಹೊರತು ಪ್ರತಿಭಟಿಸಲು ಅಲ್ಲವೆಂದು ವಿರೋಧ ವ್ಯಕ್ತಪಡಿಸಿದರು. ರಾಜಭವನಕ್ಕೆ ಪ್ರವೇಶ ಮಾಡುತ್ತಿದ್ದಂತೆ ಪ್ರತಿಭಟನಾಕಾರರು ವಶಕ್ಕೆ ಪಡೆಯಲಾಯಿತು. ರಾಜಭವನದ ಬಳಿ 2 ಕೆಎಸ್ಆರ್ಪಿ ತುಕಡಿ ಎರಡು ಬಿಎಂಟಿಸಿ ಬಸ್ ನಿಯೋಜನೆ ಮಾಡಲಾಗಿದೆ.