ಬೆಂಗಳೂರು : ಕನ್ನಡದ ಖ್ಯಾತ ನಿರೂಪಕಿ ದಿವಂಗತ ಅಪರ್ಣಾ ಸಹೋದರ ಚೈತನ್ಯ ಇಂದು ನಿಧನರಾಗಿದ್ದಾರೆ ಎಂದು ಅಪರ್ಣಾ ಪತಿ ನಾಗರಾಜ್ ರಾಮಸ್ವಾಮಿ ವಸ್ತಾರೆ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅಪರ್ಣೆಯ ಅಣ್ಣ ಚೈತನ್ಯ ನಿನ್ನೆ ನಡುರಾತ್ರಿಯಲ್ಲಿ ಈ ಇಹತೊರೆದು ಸರಿದಿದ್ದಾರೆ. ತೀವ್ರತಮ ವಿಷಾದ. ಕೆಲವು ಹೂವುಗಳು ಅರಳದೆ ಮೊಗ್ಗಾಗಿಯೇ ಉದುರಿಹೋಗುತ್ತವೆ. ಇನ್ನು ಕೆಲವು ಅರಳಿ ಹಣ್ಣಾಗದೆ ಕಮರುತ್ತವೆ. ಇನ್ನೂ ಕೆಲವನ್ನು ಒತ್ತಾಯದಿಂದ ಕೊಯ್ದು ಕತ್ತರಿಸಲಾಗುತ್ತದೆ. ಯಾರು ಯಾವುದೆಂದು ನಾನು ಈವರೆಗೂ ಅರಿತಿಲ್ಲ. ಅರಿಯುವ ಜಿಜ್ಞಾಸೆಯೂ ಈ ಹೊತ್ತಿನದಲ್ಲ. ದಿನದಿಂದ ದಿನಕ್ಕೂ ನಾನು ಹೆಚ್ಚು ಹೆಚ್ಚು ಒಬ್ಬನಾಗುತ್ತಿರುವುದು ಯಾವೊತ್ತಿನ ಸತ್ಯ. ಬಹುಶಃ ಎಲ್ಲರದೂನು ಎಂದು ಹೇಳಿದ್ದಾರೆ.