ಬೆಂಗಳೂರು : ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಸೌಂದರ್ಯ ಜಗದೀಶ್ ಅವರು ಅಪ್ಪು-ಪಪ್ಪು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಹಣಕಾಸಿನ ವಿಚಾರ ಸಂಬಂಧ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸದ್ಯ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ.
ಚಿತ್ರ ನಿರ್ಮಾಣದ ಜೊತೆಗೆ ಉದ್ಯಮಿ, ಬಿಲ್ಡರ್ ಕೂಡ ಆಗಿರುವ ಸೌಂದರ್ಯ ಜಗದೀಶ್ ಅಪ್ಪು ಮತ್ತು ಪಪ್ಪು, ಮಸ್ತ್ ಮಜಾ ಮಾಡಿ, ರಾಮ್‌ಲೀಲಾ, ಸ್ನೇಹಿತರು ಮತ್ತು ರಾಮಲೀಲಾ ಮುಂತಾದ ಜನಪ್ರಿಯ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.