ಬೆಂಗಳೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರ ನಿಧನ ಅತೀವ ದುಃಖ ತಂದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರೈ ಸಮೀಪದ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶಕ್ಕೆ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದವರು. ಜೊತೆಗೆ ಆಸಕ್ತರಿಗೆ ವೀಣೆ ತಯಾರಿಕೆಯ ಕೌಶಲ್ಯವನ್ನು ಕಲಿಸಿ, ಸಾಂಪ್ರದಾಯಿಕ ಸಾಹಿತ್ಯದ ನಿರಂತರತೆಯನ್ನು ಕಾಪಾಡುವಲ್ಲಿ ಶ್ರಮಿಸಿದ್ದರು.ಹಿರಿಯ ಜೀವ ಓಬಳಯ್ಯನವರ ಅಗಲಿಕೆಯಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.








