ಬೆಂಗಳೂರು: ನವೆಂಬರ್ 1 ರ ಇಂದು ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ.
70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ ಎಂದು ಹೇಳಿದ್ದಾರೆ.
ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದು ಹೇಳಿದ್ದಾರೆ.
ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ – ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂಬ ಆದೇಶವನ್ನು ಹೊರಡಿಸಿದ್ದೇವೆ. ಬೇರೆ ಭಾಷೆಗಳನ್ನು ಗೌರವಿಸೋಣ. ನೆಲದ ಭಾಷೆ ಕನ್ನಡವನ್ನು ಪ್ರೀತಿಸೋಣ ಎಂದು ತಿಳಿಸಿದ್ದಾರೆ.
ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ.
ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ – ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂಬ… pic.twitter.com/qsv4FDvcWn
— CM of Karnataka (@CMofKarnataka) November 1, 2025








