ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮದ ಕರಿಸಿದ್ದೇಶ್ವರ ಸ್ವಾಮೀಜಿ (69) ಲಿಂಗೈಕ್ಯರಾಗಿದ್ದಾರೆ.
ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮದ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ಗುರುಗಳಾದ ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳು ಭಾನುವಾರ ಲಿಂಗೈಕ್ಯರಾಗಿದ್ದಾರೆ.
ಶ್ರೀಗಳ ಅಂತ್ಯಕ್ರಿಯೆ ಸೋಮವಾರ ವಿರಕ್ತ ಮಠದಲ್ಲಿ ನಡೆಯಲಿದೆ. ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳು ಹಿಂದೂ ಧರ್ಮ ಹಾಗು ಸಂಸ್ಕಾರಗಳ ಕುರಿತು ಹೆಚ್ಚಿನ ಪಾಂಡಿತ್ಯ ಹೊಂದಿದ್ದರು.