ನವದೆಹಲಿ: ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಲೋಕಸಭಾ ಚುನಾವಣೆಯ ಮತದಾನ ಏಪ್ರಿಲ್ 19 ರಿಂದ ಪ್ರಾರಂಭವಾಗಲಿದ್ದು, ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏಪ್ರಿಲ್ 19 ರಂದು ಮೊದಲ ಹಂತ, ಏಪ್ರಿಲ್ 26 ರಂದು ಎರಡನೇ ಹಂತ, ಮೇ 7 ರಂದು ಮೂರನೇ ಹಂತ, ಮೇ 13 ರಂದು ನಾಲ್ಕನೇ ಹಂತ, ಮೇ 20 ರಂದು ಐದನೇ ಹಂತ, ಮೇ 25 ರಂದು ಆರನೇ ಹಂತ ಮತ್ತು ಜೂನ್ 1 ರಂದು ಏಳನೇ ಹಂತದ ಮತದಾನ ನಡೆಯಲಿದೆ.
ಈ ನಡುವೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ ೨೬ರಂದು ಮೊದಲ ಹಂತದ ಮತದಾನ ನೇರವೇರಲಿದೆ. ಮೇ ೭ರಂದು ಎರಡನೇ ಹಂತದಲ್ಲಿ ನಡೆಯಲಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.