ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದವು. ಇದೆ ವೇಳೆ 7, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಹಾಗಾಗಿ ಕರ್ನಾಟಕ ಬಂದ್ ಸದ್ಯಕ್ಕೆ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೌದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾರ್ಚ್ 22ಕ್ಕೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಬಂದ್ಗೆ ಬೆಂಬಲ ಕೊಡಲು ಕರವೇ ಅಧ್ಯಕ್ಷ ನಾರಾಯಣಗೌಡ ಬಣ ಸೇರಿದಂತೆ ಹಲವು ಕನ್ನಡ ಸಂಘಟನೆಗಳು ಹಿಂದೇಟು ಹಾಕಿವೆ.ಕೇವಲ ನೈತಿಕ ಬೆಂಬಲ ನೀಡುವುದಾಗಿ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ತಿಳಿಸಿವೆ.
ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಮಾತುಗಳು ಕೇಳಿಬಂದ ಹಿನ್ನೆಲೆ ಬಂದ್ ಗೆ ಕರೆ ನೀಡಿರುವ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಿಗದಿಯಾಗಿದೆ . ಸಭೆಯಲ್ಲಿ ಬಂದ್ ದಿನಾಂಕ ಬದಲಾಗುವ ಸಾಧ್ಯತೆ ಇದೆ.