ಬೆಂಗಳೂರು : ಬೆಳಗಾವಿಯಲ್ಲಿ ಶಿವಸೇನೆ ಮತ್ತು ಎಂಇಎಸ್ ಪುಂಡರಿಂದ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಸೇನೆ ವಿರುದ್ಧ ಇದೀಗ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ. ಕನ್ನಡಪರ ಹೋರಾಟಗಾರು ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ ಎಂದು ಹೇಳಲಾಗಿದೆ.
ಹೌದು ಶಿವಸೇನೆ ಮತ್ತು ಎಂಇಎಸ್ ವಿರುದ್ಧ ಕನ್ನಡಪ್ರ ಸಂಘಟನೆಗಳು ಸಿಡಿದೆದ್ದಿದ್ದು, ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಈ ಒಂದು ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ರಾಜ್ಯದ ಕನ್ನಡ ಪರ ಸಂಘಟನೆಗಳ ಸಭೆ ಕರೆದ ವಾಟಾಳ್ ನಾಗರಾಜ್, ಕರವೇ ಪ್ರವೀಣ್ ಕುಮಾರ್ ಶೆಟ್ಟಿ, ಶಿವರಾಮೇಗೌಡ ಬಣ, ಕನ್ನಡ ಜಾಗೃತಿ ಮಂಜುನಾಥ್ ಕೆ. ಗಿರೀಶ್ ಗೌಡ ಕನ್ನಡ ಸೇನೆ ಅಧ್ಯಕ್ಷ ಕುಮಾರ ಸೇರಿ ವಿವಿಧ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಿದ್ದು, ಇಂದಿನ ಸಭೆಯಲ್ಲಿ ಹೋರಾಟದ ರೂಪರೇಷಗಳ ಬಗ್ಗೆ ನಿರ್ಧರಿಸಲಾಗುತ್ತದೆ.