ಬೆಳಗಾವಿ : ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ತಡಿದು ಶಿವಸೇನೆ ಮತ್ತೆ ಪುಂಡಾಟ ಮೆರೆದಿದೆ. ಈ ಹಿನ್ನೆಲೆ ತಾತ್ಕಾಲಿಕವಾಗಿ ಮಹಾರಾಷ್ಟ್ರಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಮುಂಜಾಗೃತ ಕ್ರಮವಾಗಿ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯೇ ಎಲ್ಲಾ ಬಸ್ ಗಳ ಸಂಚಾರ ಬಂದ್ ಮಾಡಲಾಗಿದೆ. ಕೊಲ್ಹಾಪುರ, ಪುಣೆ, ಮುಂಬೈ, ಸೇರಿದಂತೆ ವಿವಿಧ ಕಡೆಗೆ ಕೆಎಸ್ಆರ್ಟಿಸಿ ಬಸ್ ಸಂಚರಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ನಿಪ್ಪಾಣಿಯಲ್ಲಿಯೇ ಸ್ಥಗಿತಗೊಳಿಸಲಾಗಿದೆ. ಸಂಚಾರ ಸ್ಥಗಿತ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಟ ನಡೆಸಿದರು.








