ದಾವಣಗೆರೆ : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಜಟಾಪಟಿ ನಡೆಯುತ್ತಿದ್ದು, ಅಂತಿಮವಾಗಿ ಹೈಕಮಾಂಡ್ ಎಲ್ಲರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸುಖಾಂತ್ಯ ಕಂಡಿದೆ.
ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನಡೆಸಿದ ಸಂಧಾನ ಮಾತುಕತೆಯು ಯಶಸ್ವಿಯಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಂತಿಮವಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಹಾಗು ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.
ದಾವಣಗೆರೆ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂದು ಸಚಿವ ಜಮೀರ್ ಅಹಮದ್ ಸಹಿತ ಪ್ರಮುಖ ಅಲ್ಪಸಂಖ್ಯಾತ ನಾಯಕರು ಪಟ್ಟು ಹಿಡಿದಿದ್ದರು. ಕಾಂಗ್ರೆಸ್ ಹೈಕಮಾಂಡ್ ನಾಳೆ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಿದ್ದು, ಸೋಮವಾರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.








