Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ರೈಲಿನಲ್ಲಿ ಈ 14 `ಆ್ಯಪ್’ಗಳಿಂದ ಆಹಾರ ಬುಕ್ ಮಾಡಬೇಡಿ : `IRCTC’ ಮಹತ್ವದ ಎಚ್ಚರಿಕೆ

​ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಇತಿಹಾಸ: ಮೊದಲ ‘ಮೇಡ್ ಇನ್ ಇಂಡಿಯಾ’ ಸಿ-295 ಯುದ್ಧ ವಿಮಾನದ ಚೊಚ್ಚಲ ಹಾರಾಟ ಯಶಸ್ವಿ!

ALERT : ಸ್ನೇಹಿತರಿಂದ ಸಾಲ ಪಡೆಯುವವರೇ ಎಚ್ಚರ : ₹20,000 ಮೀರಿದರೆ `IT’ ನೋಟಿಸ್ ಗ್ಯಾರಂಟಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕರ್ನಾಟಕ ಈಗ ‘ನಕ್ಸಲ್ ಮುಕ್ತ’ : ಶರಣಾದವರಿಗೆ ಶೀಘ್ರ ನ್ಯಾಯ ಕೊಡಿಸುವ ಕೆಲಸ : ಸಿಎಂ ಸಿದ್ದರಾಮಯ್ಯ ಹೇಳಿಕೆ
KARNATAKA

BREAKING : ಕರ್ನಾಟಕ ಈಗ ‘ನಕ್ಸಲ್ ಮುಕ್ತ’ : ಶರಣಾದವರಿಗೆ ಶೀಘ್ರ ನ್ಯಾಯ ಕೊಡಿಸುವ ಕೆಲಸ : ಸಿಎಂ ಸಿದ್ದರಾಮಯ್ಯ ಹೇಳಿಕೆ

By ಸುರೇಶ್‌

ಬೆಂಗಳೂರು : ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ನಕ್ಸಲರು ನಿನ್ನೆ ಬೆಂಗಳೂರಿನ ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲಿ ಶರಣಾದರು. ಈ ವಿಚಾರವಾಗಿ ನನ್ನ ಪ್ರಕಾರ ಇದೀಗ ಕರ್ನಾಟಕ ನಕ್ಸಲ್ ಮುಕ್ತವಾಗಿದ್ದು, ಶೀಘ್ರದಲ್ಲಿ ಶರಣಾದ ನಕ್ಸಲರಿಗೆ ನ್ಯಾಯ ಕೊಡಿಸುವ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದರು.

ನಿನ್ನೆ ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮುಖ್ಯವಾಹಿನಿಗೆ ಬರಮಾಡಿಕೊಂಡು ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು.

ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ. ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದೆ.

ನಾವು ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಅವರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ. ಶಸ್ತ್ರಾಸ್ತ್ರದ ಮೂಲಕ ಹೋರಾಟ ಮಾಡಿ ನ್ಯಾಯ ಪಡೆಯಲು ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ‌ ಅವಕಾಶವಿಲ್ಲ. ಶಾಂತಿಯುತವಾಗಿ ಹೋರಾಟ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಇದನ್ನು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ.

ಅನ್ಯಾಯ ಕಡಿಮೆ ಮಾಡಲು ನಮ್ಮ ಸರ್ಕಾರ ಬಹಳ ಪ್ರಯತ್ನ ಮಾಡುತ್ತಿದೆ. ಯಾರ ಮೇಲೆಯೂ ಅನ್ಯಾಯ ಆಗಬಾರದು ಎಂಬುವುದು ನಮ್ಮ ಧ್ಯೇಯ. ಬಡವರ ಹಕ್ಕುಗಳ ರಕ್ಷಣೆಗಾಗಿ, ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಲು ಅನೇಕ ಕಾರ್ಯಕ್ರಮ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಗಳ ಉದ್ದೇಶವೂ ಇದೇ ಆಗಿದೆ. ಬಡವರು ಗೌರವಯುತವಾಗಿ ಬದುಕಲು ಅವಕಾಶ ಸಿಗಲಿದೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬದುಕಲು ಶಕ್ತಿ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ.

ನಕ್ಸಲಿಸಂ ಮುಕ್ತವಾದ ಸಮಾಜ ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗೆ ಬರುವ ನಕ್ಸಲಿಯರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಬಹಿರಂಗವಾಗಿ ಹೇಳಿದ್ದೆ. ಅವರನ್ನು ಕ್ರಿಮಿನಲ್‌ಗಳ ರೀತಿ ನೋಡದೆ, ಮಾನವರಂತೆ ನೋಡುವ ಭರವಸೆ ನೀಡಿದ್ದೆ. ನಕ್ಸಲೀಯರ ಶರಣಾಗತಿಯಲ್ಲಿ ಸಮಿತಿಯ ಸದಸ್ಯರ ಪಾತ್ರ ಮುಖ್ಯವಾಗಿದ್ದು, ಅವರಿಗೆ ಹಾಗೂ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಬಯಸುತ್ತೇನೆ ಎಂದರು.

ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯಮಂತ್ರಿ @siddaramaiah ಅವರು ಇಂದು ಮುಖ್ಯವಾಹಿನಿಗೆ ಬರಮಾಡಿಕೊಂಡು ಮಾತನಾಡಿದರು.

ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ,… pic.twitter.com/wBdmMUvfmo

— CM of Karnataka (@CMofKarnataka) January 8, 2025

Share. Facebook Twitter LinkedIn WhatsApp Email

Related Posts

ALERT : ಸ್ನೇಹಿತರಿಂದ ಸಾಲ ಪಡೆಯುವವರೇ ಎಚ್ಚರ : ₹20,000 ಮೀರಿದರೆ `IT’ ನೋಟಿಸ್ ಗ್ಯಾರಂಟಿ.!

2 Mins Read

SHOCKING : ಪೋಷಕರೇ ಎಚ್ಚರ : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

1 Min Read

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

1 Min Read
Recent News

ALERT : ರೈಲಿನಲ್ಲಿ ಈ 14 `ಆ್ಯಪ್’ಗಳಿಂದ ಆಹಾರ ಬುಕ್ ಮಾಡಬೇಡಿ : `IRCTC’ ಮಹತ್ವದ ಎಚ್ಚರಿಕೆ

​ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಇತಿಹಾಸ: ಮೊದಲ ‘ಮೇಡ್ ಇನ್ ಇಂಡಿಯಾ’ ಸಿ-295 ಯುದ್ಧ ವಿಮಾನದ ಚೊಚ್ಚಲ ಹಾರಾಟ ಯಶಸ್ವಿ!

ALERT : ಸ್ನೇಹಿತರಿಂದ ಸಾಲ ಪಡೆಯುವವರೇ ಎಚ್ಚರ : ₹20,000 ಮೀರಿದರೆ `IT’ ನೋಟಿಸ್ ಗ್ಯಾರಂಟಿ.!

​’ನವ ಮಧ್ಯಮ ವರ್ಗದ ಕೈಬಿಡುವುದಿಲ್ಲ’: ದೇಶದ ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹೆಮ್ಮೆಯಲ್ಲಿ ಪಿಎಂ ಮೋದಿ ಭರವಸೆ!

State News
KARNATAKA

ALERT : ಸ್ನೇಹಿತರಿಂದ ಸಾಲ ಪಡೆಯುವವರೇ ಎಚ್ಚರ : ₹20,000 ಮೀರಿದರೆ `IT’ ನೋಟಿಸ್ ಗ್ಯಾರಂಟಿ.!

By kannadanewsnow57 KARNATAKA 2 Mins Read

ನಗದು ವಹಿವಾಟುಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ (Income Tax Department) ನಿಯಮಗಳನ್ನು ಅತ್ಯಂತ ಕಠಿಣಗೊಳಿಸಿದೆ. ದೇಶದಲ್ಲಿ ಪಾರದರ್ಶಕವಾಗಿ ಹಣಕಾಸು…

SHOCKING : ಪೋಷಕರೇ ಎಚ್ಚರ : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜೈಲು ಪಾಲಾಗಿ ಇಂದಿಗೆ 2 ವರ್ಷ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.