ಬೆಂಗಳೂರು : ವಿದೇಶಿ ಬಂಡವಾಳ ಸ್ವೀಕಾರದಲ್ಲಿ ಮಹಾರಾಷ್ಟ್ರವನ್ನು ಹಿಂದಿಕ್ಕಿ ಕರ್ನಾಟಕ ಮೊದಲ ಸ್ಥಾನಕ್ಕೆ ಏರಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ರಾಜ್ಯಗಳು ಸ್ವೀಕರಿಸಿದ ವಿದೇಶಿ ಬಂಡವಾಳ ಪಟ್ಟಿಯಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದ್ದು, ₹50,107 ಕೋಟಿ ಬಂಡವಾಳ ರಾಜ್ಯಕ್ಕೆ ಹರಿದುಬಂದಿದೆ. ಕಳೆದ ಹಲವು ವರ್ಷಗಳಿಂದ ಮೊದಲ ಸ್ಥಾನದಲ್ಲಿದ್ದ ಮಹಾರಾಷ್ಟ್ರವನ್ನು ಹಿಂದಿಕ್ಕಿ ರಾಜ್ಯ ಪ್ರಥಮ ಸ್ಥಾನ ತಲುಪಿದೆ. ಇದು ಕರ್ನಾಟಕದ ಬಗೆಗೆ ಅಂತಾರಾಷ್ಟ್ರೀಯ ಹೂಡಿಕೆದಾರರು ಹೊಂದಿರುವ ವಿಶ್ವಾಸ ಮತ್ತು ಭರವಸೆಯನ್ನು ಪ್ರತಿಬಿಂಬಿಸುತ್ತದೆ ಎಂದರು.
ರಾಜ್ಯಗಳು ಸ್ವೀಕರಿಸಿದ ವಿದೇಶಿ ಬಂಡವಾಳ ಪಟ್ಟಿಯಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದ್ದು, ₹50,107 ಕೋಟಿ ಬಂಡವಾಳ ರಾಜ್ಯಕ್ಕೆ ಹರಿದುಬಂದಿದೆ. ಕಳೆದ ಹಲವು ವರ್ಷಗಳಿಂದ ಮೊದಲ ಸ್ಥಾನದಲ್ಲಿದ್ದ ಮಹಾರಾಷ್ಟ್ರವನ್ನು ಹಿಂದಿಕ್ಕಿ ರಾಜ್ಯ ಪ್ರಥಮ ಸ್ಥಾನ ತಲುಪಿದೆ. ಇದು ಕರ್ನಾಟಕದ ಬಗೆಗೆ ಅಂತಾರಾಷ್ಟ್ರೀಯ ಹೂಡಿಕೆದಾರರು ಹೊಂದಿರುವ ವಿಶ್ವಾಸ ಮತ್ತು… pic.twitter.com/NGhXOpFp5X
— Siddaramaiah (@siddaramaiah) September 4, 2025
ಕರ್ನಾಟಕದ ಈ ಸಾಧನೆಗೆ ನಮ್ಮ ಸರ್ಕಾರದ ನೀತಿಗಳು ರಾಜ್ಯದಲ್ಲಿ ಹೂಡಿಕೆಸ್ನೇಹಿ ಪರಿಸರ ನಿರ್ಮಿಸಿರುವುದು ಕಾರಣ ಎಂಬುದನ್ನು ಈ ಸಂದರ್ಭದಲ್ಲಿ ನೆನೆಯ ಬಯಸುತ್ತೇನೆ ಎಂದು ಹೇಳಿದ್ದಾರೆ.